ತಾಜಾ ಸುದ್ದಿ


ಖಾನಾಪುರ: ವಿಶ್ವ ಪರಿಸರ ದಿನಾಚರಣೆ ದಿನದಂದು ಸಸಿಗಳನ್ನು ನೆಡುವುದು, ಪರಿಸರ ಸಂರಕ್ಷ ಣೆಯ ಬಗ್ಗೆ ಭಾಷಣ ಮಾಡುವುದು ಸಾಮಾನ್ಯವಾಗಿ ಎಲ್ಲೆಡೆ ಕಂಡುಬರುತ್ತದೆ. ಆದರೆ, ಖಾನಾಪುರ ತಾಲೂಕಿನ ಲೋಂಡಾ ಅರಣ್ಯ ವಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ಬೆಳಗಾವಿ-ಪಣಜಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಸಂಗ್ರಹಗೊಂಡಿದ್ದ ತ್ಯಾಜ್ಯ ತೆರವುಗೊಳಿಸಲು ವಿಶೇಷ ಅಭಿಯಾನ ಹಮ್ಮಿಕೊಂಡು ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿಸಿದ್ದಾರೆ